Karnataka Guest Teacher Recruitment 2021-2022 | Apply for 18000 Vacant Posts | Latest Notification Dated November 04th 2021
Appointment of Primary Guest teachers for 18000 Vacant Posts in Karnataka State Government Schools for the year 2021-2022.
2021-22 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ
ಉಲ್ಲೇಖ:- 1 ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ ಆಇ 403 ವೆಚ್ಚ-8/ ದಿನಾಂಕ 04.11.2021.
2, ಈ ಕಛೇರಿ ಸುತ್ತೋಲೆ ಸಂಖ್ಯೆ ಸಿ3(1) ಪ್ರಾಶಿ ವೃಬ. ಜಿಲ್ಲಾವಾರು ಹಂಚಿಕೆ 17-18 ದಿನಾಂಕ 02.02.2018
3, ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲೆಗಳ ಉಪನಿರ್ದೆಶಕರುಗಳಿಂದ ಸ್ವೀಕೃತವಾದ ಕೋರಿಕೆಯಂತೆ
ಕರ್ನಾಟಕ ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಛೇರಿ, ನೃಪತುಂಗ ರಸ್ತೆ, ಬೆಂಗಳೂರು.
ಸಂಖ್ಯೆ:ಸಿ3[1]ಪ್ರಾ.ಶಿ: ಅ.ಶಿ. ನೇ.01/2021-22 ದಿನಾಂಕೆ (14.11.2021)
ಜ್ಞಾಪನಾ
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸೆಪ್ಟೆಂಬರ್-2021 ರಿಂದ ಮಾರ್ಚ್ 2022 ರವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದರೆಗೆ ಇವರೆಡರಲ್ಲಿ ಯಾವುದು ನಂತರವೂ ಅಲ್ಲಿಯವರೆಗೆ
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಒಟ್ಟು- 18000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಉಲ್ಲೇಖ 01 ರ ಟಿಪ್ಪಣಿಯಲ್ಲಿ ಆರ್ಥಿಕ ಇಲಾಖೆಯು ಸಹಮತಿ ನೀಡಲಾಗಿದೆ.
ಉಲ್ಲೇಖ 02 ರ ಸುತ್ತೋಲೆಯಲ್ಲಿ ರಾಜ್ಯದ ಸರ್ಕಾರ ಪ್ರಾಥಮಿಕ ಶಾಲೆಗಳಿಗೆ ವೃಂದ ಬಲ ನಿಗದಿಗೊಳಿಸಿರುವ ಸರ್ಕಾರದ ಆದೇಶದ ಕ್ರಮಗಳನ್ನು ಮತ್ತು ಇಲಾಖಾ ಅಧಿಸೂಚನೆಯಲ್ಲಿನ ಸೂಚನೆಗಳನ್ನು ಪಾಲಿಸಿ ಪ್ರತಿ ಶಾಲೆಗೆ ಅಗತ್ಯವಿರುವ ಶಿಕ್ಷಕರ ಹುದ್ದೆಗಳ ಕುರಿತಂತೆ, ಶಾಲಾವಾರು ವೃಂದ ಮಂಜೂರಾತಿ ಕ್ರಮಗಳನ್ನು ಈಗಾಗಲೇ ಜಿಲ್ಲಾ ಹಂತದಲ್ಲಿ ನಿಯಮಾನುಸಾರ ಕೈಗೊಳ್ಳಲಾಗಿರುತ್ತದೆ.
ಸದರಿ ಆಧಾರದಲ್ಲಿ ಎಲ್ಲಿ ಅಗತ್ಯ ಖಾಲಿ ಹುದ್ದೆಗಳಿವೆಯೋ ಅಂತಹ ಖಾಲಿ ಹುದ್ದೆಗಳಲ್ಲಿ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಪ್ರಸ್ತುತ ಲà²್ಯವಿರುವ ಖಾಲಿ ಹುದ್ದೆಗಳ ಮಾಹಿತಿಯನ್ನಾಧರಿಸಿ, ಲಗತ್ತಿಸಲಾಗಿರುವ ಅನುಬಂಧದಲ್ಲಿರುವಂತೆ ಜಿಲ್ಲಾವಾರು/ಹಾಲ್ಲೂಕುವಾರು ಹಂಚಿಕೆ ಮಾಡಲಾಗಿದೆ. ವರ್ಗಾವಣೆ ಪ್ರಕ್ರಿಯೆ ಜಾರಿಯಲ್ಲಿರುವುದರಿಂದ ಖಾಲಿ ಹುದ್ದೆಗೆ ವರ್ಗಾವಣೆಗೊಂಡ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ಕೂಡಲೇ, ಅತಿಥಿ ಶಿಕ್ಷಕರನ್ನು ಸಂಬಂಧಪಟ್ಟ ಶಾಲೆಯಿಂದ ಬಿಡುಗಡೆ ಮಾಡಿ ತಾಲ್ಲೂಕಿನ ಒಳಗೆ ಅಗತ್ಯ ಖಾಲಿ ಹುದ್ದೆ ಇರುವ ಶಾಲೆಯಲ್ಲಿ ಮುಂದುವರಿಸಲು ನಿಯಮಾನುಸಾರ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸಲು ಸೂಚಿಸಿದೆ,
ಕೆಳಕಂಡ ಷರತ್ತುಗಳಿಗೆ ಒಳಪಡಿಸಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿದೆ.
1. ಉಪನಿರ್ದೇಶಕರು ಈ ಕಛೇರಿಗೆ ಸಲ್ಲಿಸಿರುವ ಶಾಲ್ಲೂಕುವಾರು ಅತಿಥಿ ಶಿಕ್ಷಕರ ಬೇಡಿಕೆಯನ್ನಾಧರಿಸಿ ಅಗತ್ಯವಿರುವ ಹುದ್ದೆಗಳ ಸಂಖ್ಯೆಯನ್ನು ಹಂಚಿಕೆ ಮಾಡಲಾಗಿದ್ದು, ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಆದ್ಯತೆ ಮೇರೆಗೆ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ಅಗತ್ಯ ಕ್ರಮವಹಿಸುವುದು.
2, ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ಮಾಡುವುದು.
3, ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಪ್ರಮುಖವಾಗಿ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ ಹುದ್ದೆಗಳಿಗೆ ಹಾಗೂ ಶಿಕ್ಷಕರ ರಹಿತ ಶಾಲೆಗಳಿಗೆ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಯ ಖಾಲಿ ಹುದ್ದೆಗಳಿಗೆ ಮೊದಲ ಆದ್ಯತೆ ನೀಡುವುದು.
No comments
It's all about friendly conversation here at postalstudy. I'd love to hear your thoughts!
Be sure to check back again because I do make every effort to reply to your comments here.