ಕರ್ನಾಟಕ ಗೃಹ ಲಕ್ಷ್ಮಿ ಯೋಜನೆ 2023 Details | Karnataka Gruhalakshmi Scheme Application Details and Features
ಗೃಹಲಕ್ಷ್ಮೀ ಯೋಜನೆ: ಮನೆಯ ಯಜನಮಾನಿಗೆ ತಿಂಗಳಿಗೆ 2 ಸಾವಿರ ರೂ. ಒದಗಿಸುವ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಇದಕ್ಕೆ ಬ್ಯಾಂಕ್ ಖಾತೆ,ಆಧಾರ್ ಕಾರ್ಡ್ ಒದಗಿಸಬೇಕಿದೆ. ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಜು.15ರಿಂದ ಆಗಸ್ಟ್ 15ರವರೆಗೆ ಈ ಪ್ರಕ್ರಿಯೆಯನ್ನು ಸಂಪೂರ್ಣ ಪೂರ್ಣಗೊಳಿಸಿ ಸ್ವಾತಂತ್ರೋತ್ಸವ ದಿನವಾದ ಆ.15ರಂದು ಈ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ದಾರರೆಲ್ಲರಿಗೂ ನೀಡಲಾಗುತ್ತದೆ. ಈಗಾಗಲೇ ಸಾಮಾಜಿಕ ಭದ್ರತಾ ಯೋಜನೆ ಅಡಿ ಪಿಂಚಣಿ ಪಡೆಯುತ್ತಿರುವವರ ಪಿಂಚಣಿಯ ಜೊತೆಗೆ ಈ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂ.ಹಣವೂ ಅವರ ಕೈ ಸೇರಲಿದ್ದು,ಯಾವುದನ್ನು ಕಡಿತಗೊಳಿಸುವ ಪ್ರಶ್ನೆಯೇ ಇಲ್ಲ. ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಸಾಪ್ಪವೇರ್‌ವೊಂದನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು. ಮನೆಯ ಯಜಮಾನಿ ಯಾರು ಎಂಬುದನ್ನು ಆ ಕುಟುಂಬದವರೇ ನಿರ್ಧರಿಸಿಕೊಳ್ಳಬೇಕು ಎಂದರು.
Karnataka Gruhalakshmi Scheme Features
- ಜೂ. 15ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಬೇಕು
- ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಸಲ್ಲಿಸಬಹುದು
- ಆಗಸ್ಟ್ 15ರಂದು ಯಜಮಾನಿ ಖಾತೆಗೆ ಹಣ ಜಮಾ
- ಯಜಮಾನಿಯನ್ನು ಕುಟುಂಬಸ್ತರೇ ನಿರ್ಧರಿಸಬೇಕು